ಅಕ್ರಮ ಮರಳು ಸಾಗಾಟ: ಲಾರಿ ವಶ
ಮಂಗಳೂರು: ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಮರಳು ಲಾರಿಯನ್ನು ಮಂಗಳೂರಿನ ಪಡೀಲ್ ಜಂಕ್ಷನ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. KA-46-3202 ಲಾರಿಯನ್ನು ಪರಿಶೀಲಿಸಿದಾಗ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ. ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿಆರ್ ಝಡ್ ಮರಳು ದಿಬ್ಬ ತೆರವು ನಿಷೇಧ
ಉಡುಪಿ, ಜೂನ್ 14: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ 2018-19 ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ 45 ಜನ ಸ್ಥಳೀಯ ಸಾಂಪ್ರದಾಯಿಕ ಮರಳು ಪರವಾನಗೆದಾರರಿಗೆ ಪರವಾನಿಗೆ ನೀಡಿ ಮರಳು ದಿಬ್ಬ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು, ಅವರಿಗೆ ನಿಗಧಿಪಡಿಸಿರುವ ಪ್ರಮಾಣವು ಮುಗಿದಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 1 ರಿಂದ ಜುಲೈ 31 ರ ವರೆಗೆ ಮೀನುಗಾರಿಕೆ ನಿಷೇಧವಿರುವುದರಿಂದ ಈ ಅವಧಿಯಲ್ಲಿ ಸಿಆರ್ ಝಡ್ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದು ನಿಷೇಧವಿರುತ್ತದೆ. ಆದ್ದರಿಂದ ಅವಧಿಯಲ್ಲಿ ಯಾವುದೇ ಮರಳು ದಿಬ್ಬ […]
ಮರಳು ಹೋರಾಟ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಎಚ್ಚರಿಕೆ, ಮರಳಿನ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರ ಎದುರಿಸಿ
ಉಡುಪಿ: ಜಿಲ್ಲೆಯ ಮರಳಿನ ಸಮಸ್ಯೆ ಬಗೆಹರಿಯಬೇಕು. ಇಲ್ಲದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಟಪಾಡಿ ಟೆಂಪೋ ಹಾಗೂ ಲಾರಿ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ಮರಳು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮತ ಹಾಕುವುದು ಬಿಡುವುದು ನಮ್ಮ ವೈಯಕ್ತಿಕ ವಿಚಾರ. ಮತ ಹಾಕದಿದ್ದರೆ ನಿಮ್ಮ ಮೇಲೆ ಕ್ರಮ ಜರುಗಿಸುತ್ತೇನೆ ಎಂದು ಡಿಸಿ ಹೇಳುತ್ತಾರೆ. […]
ಕೇಂದ್ರ, ರಾಜ್ಯ ಸರ್ಕಾರದಿಂದ ಜಿಲ್ಲೆಯ ಸಂಪೂರ್ಣ ನಿರ್ಲಕ್ಷ್ಯ: ಆರೋಪ
ಉಡುಪಿ: ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಅನುದಾನ ಹಂಚಿಕೆ, ಅಭಿವೃದ್ಧಿ ಕಾಮಗಾರಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಎರಡು ಸರ್ಕಾರಗಳು ಜಿಲ್ಲೆಗೆ ಅನ್ಯಾಯ ಮಾಡುತ್ತಿವೆ ಎಂದು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ ಆರೋಪಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಿಲ್ಲೆಯ ಮರಳು ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಸಮಿತಿ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದು, […]
ಮರಳು ಅಭಾವಕ್ಕೆ ಉಡುಪಿ ಶಾಸಕರೇ ಕಾರಣ: ವಿಶ್ವನಾಥ ಪೇತ್ರಿ ಆರೋಪ
ಉಡುಪಿ: ಜಿಲ್ಲೆಯ ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು ಪರಿಶಿಷ್ಟ ಜಾತಿಯ ಸಾಂಪ್ರದಾಯಿಕ ಮರಳು ಕಾರ್ಮಿಕರಿಗೆ ಪರವಾನಗಿ ನೀಡಬೇಕೆಂದು ಒತ್ತಾಯಿಸಿಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹೊಯ್ಗೆ ದೋಣಿ ಕಾರ್ಮಿಕರ ಸಂಘದವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಧರಣಿ ನಡೆಸಲಾಯಿತು. ಸಂಘದ ಗೌರವಾಧ್ಯಕ್ಷ ಉದಯ ಕುಮಾರ್ ತಲ್ಲೂರ್ ಮಾತನಾಡಿ, ನಾವು ಜಿಲ್ಲಾಡಳಿತ ಅಥವಾ ಗುಲಾಮಗಿರಿಯ ಪರವಾಗಿ ಪ್ರತಿಭಟನೆ ಮಾಡುತ್ತಿಲ್ಲ. ನಮಗೆಆಗಿರುವ ಅನ್ಯಾಯವನ್ನು ಸಚಿವರಿಗೆ ತಿಳಿಸುವ ಉದ್ದೇಶದಿಂದ ಧರಣಿಗೆಕುಳಿತುಕೊಂಡಿದ್ದೇವೆ. ನೀವು ಓರ್ವ ಶಾಸಕರಾಗಿ (ರಘುಪತಿ ಭಟ್) […]