ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಪೊಲೀಸರು, ಎರಡು ಪ್ರತ್ಯೇಕ ಧರಣಿನಿರತ ಗುಂಪುಗಳ ನಡುವೆ ಮಾತಿನ ಚಕಮಕಿ

ಉಡುಪಿ: ಜಿಲ್ಲಾಧಿಕಾರಿ ಕಚೇರಿಯ ಎದುರು ಇಂದು ಎರಡು ಪ್ರತ್ಯೇಕ ಪ್ರತಿಭಟನೆಗಳು ನಡೆದಿದ್ದು, ಇದು ಪ್ರತಿಭಟನಾಕಾರರು ನಡುವೆ ಮಾತಿನ ಸಮರಕ್ಕೂ ವೇದಿಕೆಯಾಯಿತು. ಮರಳು ಸಮಿತಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದರೆ, ಅವರ ಪ್ರತಿಭಟನೆಯ ಪಕ್ಕದಲ್ಲೇ ಮರಳು ಪರವಾನಗಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಹೊಯ್ಗೆ ದೋಣಿ ಕಾರ್ಮಿಕರ ಸಂಘದ ವತಿಯಿಂದ ಧರಣಿ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ನಗರಸಭೆ ಸದಸ್ಯರೊಬ್ಬರು ಕಾರನ್ನು ತಂದು ಪ್ರತಿಭಟನೆ ಮಾಡುವ ಸ್ಥಳದ ಮುಂದೆ ನಿಲ್ಲಿಸಿದರು. ಆಗ ಕಾರ್ಮಿಕ […]

ಕರಾವಳಿಗೆ ಪ್ರತ್ಯೇಕ ಮರಳು ನೀತಿ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿಯಲ್ಲಿ ಚರ್ಚೆ- ರಾಜಶೇಖರ ಪಾಟೀಲ್

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಮರಳುಗಾರಿಕೆ ಕುರಿತಂತೆ ಪ್ರತ್ಯೇಕ ನೀತಿ ರೂಪಿಸಲು ಕ್ಯಾಬಿನೆಟ್ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ ತಿಳಿಸಿದ್ದಾರೆ. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ರಾಜ್ಯದ ಇತರೆ ಜಿಲ್ಲೆಗಳಿಗೆ ರೂಪಿಸಿದ ನಿಯಮಗಳು ಈ ಜಿಲ್ಲೆಗೆ  ಅನ್ವಯಿಸುವುದಿಲ್ಲ, ಆದ್ದರಿಂದ ಈ ಜಿಲ್ಲೆಗಳ ಪ್ರಾದೇಶಿಕತೆಗೆ ಅನುಗುಣವಾಗಿ ಪ್ರತ್ಯೇಕ ಮರಳು ನೀತಿ ರೂಪಿಸುವಂತೆ ಹಾಗೂ ನಿಯಮಗಳನ್ನು […]