ಸ್ಯಾಂಡಲ್ ವುಡ್ ನಿರ್ಮಾಪಕ ಕೋಟಿ ರಾಮು ಕೋವಿಡ್ ಗೆ ಬಲಿ
ಬೆಂಗಳೂರು: ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿರುವ ನಿರ್ಮಾಪಕ ಹಿರಿಯ ನಟಿ ಮಾಲಾಶ್ರೀ ಅವರ ಪತಿ ರಾಮು ಅವರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಒಂದು ವಾರದ ಹಿಂದೆ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಅಸುನೀಗಿದ್ದಾರೆ. ‘ರಾಜಕೀಯ’ ಸಿನಿಮಾ ಮೂಲಕ ನಿರ್ಮಾಪಕರಾದ ಅವರು ಬಳಿಕ ಗೋಲಿಬಾರ್, ಲಾಕಪ್ ಡೆತ್ ಚಿತ್ರಗಳ ಮೂಲಕ ಯಶಸ್ಸು ಹಾಗೂ ಜನಪ್ರಿಯತೆ ಗಳಿಸಿದರು. ಕಲಾಸಿಪಾಳ್ಯ, ಸಿಬಿಐ ದುರ್ಗಾ, ಎಕೆ-47, […]