ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್‌ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಪೋಷಕ ನಟ ಸತ್ಯಜಿತ್‌(72) ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನ ಹೊಂದಿದರು. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ವಾರದ ಹಿಂದಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಆರೋಗ್ಯದ ಸಮಸ್ಯೆಗಳ ಜೊತೆ 2016ರಲ್ಲಿ ಗ್ಯಾಂಗ್ರಿನ್‌ಗೆ ತುತ್ತಾಗಿ ಒಂದು ಕಾಲನ್ನು ಸತ್ಯಜಿತ್‌ ಕಳೆದುಕೊಂಡರು. ಬಳಿಕವೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು. ಅವರಿಗೆ ಪುತ್ರಿ ಹಾಗೂ ಪುತ್ರ […]