ಮಂಗಳೂರು: ಕರಾವಳಿ ಗೋಕಳ್ಳತನ ಪತ್ತೆಗೆ ವಿಶೇಷ ತಂಡ ರಚನೆ: ಸಂದೀಪ್‌ ಪಾಟೀಲ್

ಮಂಗಳೂರು, ಜೂ.28: ಗೋವುಗಳ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಮಂಗಳೂರಿನ ಕಮಿಷನರೇಟ್ ವ್ಯಾಪ್ತಿ ಜತೆಗೆ  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದಲ್ಲಿ ಕೆಲವೊಂದು ಗೋವು ಕಳವು ಆರೋಪಿಗಳು ವಾಸಿಸುತ್ತಿದ್ದಾರೆ‌. ಆ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಿದ್ದು, ರಾತ್ರಿ ಬೀಟ್​ಗಳನ್ನು ಬಿಗಿಗೊಳಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದ ಬಳಿಕ ಅವರು […]