ಸಿಟಿ ಬಸ್ ನಿಲ್ದಾಣ ವೃತ್ತಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ: ಆಕ್ಷೇಪಣೆ ಆಹ್ವಾನ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಿಂದ ನರ್ಮ್ ಬಸ್ ಸ್ಟ್ಯಾಂಡ್ ಬಳಿಯಿಂದ ಸರ್ವೀಸ್ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿರುವ ವೃತ್ತಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಎಂದು ನಾಮಕರಣ ಮಾಡುವ ಕುರಿತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಇವರು ಮನವಿ ಸಲ್ಲಿಸಿದ್ದು, ಈ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ ಸಾರ್ವಜನಿಕರು 30 ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.