ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಪುತ್ತೂರಿಗೆ ಆಗಮಿಸುತ್ತಿದ್ದು, ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ.11 ರಂದು ಸಂಜೆ 3 ಗಂಟೆಗೆ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಮಂಗಳವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು. ಇದರಲ್ಲಿ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ, […]