ಸಂಜೀವಿನಿ ಸೂಪರ್ ಮಾರ್ಕೆಟ್ ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವಂತಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ ‘ಸಂಜೀವಿನಿ ಸೂಪರ್ ಮಾರ್ಕೆಟ್’ ಅನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರದಂದು ಉದ್ಘಾಟಿಸಿದರು. ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಸಚಿವೆ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಶಾರೀರಿಕವಾಗಿ ಅಶಕ್ತರಿರಬಹುದು, ಆದರೆ ಮಾನಸಿಕವಾಗಿ ಪುರುಷರಿಗಿಂತ ಹೆಚ್ಚು ಶಕ್ತವಾಗಿದ್ದಾಳೆ ಎಂದರು. ಫ್ಯಾಬ್ ಇಂಡಿಯಾ, ಗುಡ್ […]

ಮಹಿಳೆಯರಿಂದ ಮಹಿಳೆಯರಿಗಾಗಿ ನಡೆಯುವ ಉಡುಪಿಯ ಪ್ರಪ್ರಥಮ ‘ಸಂಜೀವಿನಿ’ ಸೂಪರ್ ಮಾರ್ಕೆಟ್

ಮಹಿಳಾ ಸಬಲೀಕರಣದ ಮೂಲಕ ಕುಟುಂಬದ ಆರ್ಥಿಕ ಬೆಳವಣಿಗೆಯ ಉದ್ದೇಶದಿಂದ ಜಾರಿಗೆ ತಂದಿರುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯ ಮಹಿಳೆಯರು ಆರ್ಥಿಕ ಲಾಭ ತರುವ ಹಲವು ಉದ್ಯಮಗಳಲ್ಲಿ ತೊಡಗಿದ್ದು, ಇದೇ ಮೊದಲ ಬಾರಿಗೆ ಎಲ್ಲಾ ಸೇವೆಗಳನ್ನು ಒದಗಿಸುವ ಸೂಪರ್ ಮಾರ್ಕೆಟ್ ಆರಂಭಿಸುತ್ತಿದ್ದು, ಆಗಸ್ಟ್ 14 ರಂದು ಈ ಸೂಪರ್ ಮಾರ್ಕೆಟ್ ಉಡುಪಿಯ ಹೃದಯಭಾಗದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಆರಂಭಗೊಳ್ಳಲಿದೆ. ಈ ಸೂಪರ್ ಮಾರ್ಕೆಟ್ ನಲ್ಲಿ ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘದ ಉತ್ತಮ ಗುಣಮಟ್ಟದ ಅಲಂಕಾರಿಕ/ಒಳಾಂಗಣ […]