ಸಂಜೀವಿನಿ ಸ್ವ-ಸಹಾಯ ಸಂಘದ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ದೇಶಕ್ಕೆ ಮಾದರಿ: ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿ: ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಉಡುಪಿ ಜಿಲ್ಲೆಯು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಸಂಜೀವಿನಿ ಮಾರಾಟ ಮಳಿಗೆಯಲ್ಲಿ, ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ವಿವಿಧ ವಿನ್ಯಾಸದ ಮಣ್ಣಿನ ಹಣತೆ, ದೀಪಾವಳಿ ಗಿಫ್ಟ್ ಪ್ಯಾಕ್ ಹಾಗೂ ಉಡುಪಿ ಸಂಜೀವಿನಿ ಕಜೆ ಅಕ್ಕಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸಂಜೀವಿನಿ ಸಂಘದ ಸದಸ್ಯರ ಹಡಿಲು ಗದ್ದೆ ಕೃಷಿಯು ಜನರಲ್ಲಿ ಕೃಷಿಯ […]