ಮೇ. 28 ರಂದು ನೂತನ ಸಂಸತ್ ಭವನ ಉದ್ಘಾಟನೆ ನಡೆಸಲಿರುವ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನೆಗೆ ದಿನಗಣನೆ ನಡೆಯುತ್ತಿದ್ದು, ಬಹುತೇಕ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮ ವರದಿಯಾಗಿದೆ. ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕಟ್ಟಡದ ಉದ್ಘಾಟನೆ ನಡೆಯಲಿದೆ ಎನ್ನಲಾಗಿದೆ. ನಾಲ್ಕು ಅಂತಸ್ತಿನ ಸಂಸತ್ ಭವನದಲ್ಲಿ 1,224 ಸಂಸತ್ ಸದಸ್ಯರಿಗೆ ಆಸನ ವ್ಯವಸ್ಥೆ ಇದ್ದು, ಅತ್ಯಾಧುನಿಕ ಸವಲತ್ತು ಮತ್ತು ಸುರಕ್ಷತೆಯನ್ನು ಒಳಗೊಂಡಿದೆ. ಲೋಕಸಭೆ […]