ಸಂತೆಕಟ್ಟೆ ಸರ್ವೀಸ್ ರೋಡ್ ಕಾಮಗಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಉಡುಪಿ ತಾಲೂಕು ಸಂತೆಕಟ್ಟೆ ಜಂಕ್ಷನ್‌ನಿಂದ ಉಪ್ಪೂರು ಬ್ರಿಡ್ಜ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕ ಸರ್ವೀಸ್ ರೋಡ್ ನಿರ್ಮಾಣಕ್ಕೆ ಅಡಚಣೆಯಾಗುವ ವಿವಿಧ ಜಾತಿಯ 109 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 6 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ […]

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಕ್ತಾಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಗುರುವಾರ ನಗರದ ಸಂತೆಕಟ್ಟೆ ಜಂಕ್ಷನ್ ನಲ್ಲಿ ಓವರ್ ಪಾಸ್ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್ […]