ಕುಸಿಯುತ್ತಿದೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ: ಸಾರ್ವಜನಿಕರಲ್ಲಿ ಹೆಚ್ಚುತ್ತಿದೆ ಆತಂಕ
ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಸೋಮವಾರ ಮಣ್ಣು ಕುಸಿಯುತ್ತಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು, ಈ ಕಾರಣದಿಂದ ಅಲ್ಲಿ ನಿರ್ಮಿಸಲಾಗಿರುವ ತಡೆಗೋಡೆಗಳಿಗೂ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೆ, ಮಣ್ಣು ಕುಸಿತ ಹೆಚ್ಚಾಗುತ್ತಿದ್ದು ಅದರಿಂದಾಗಿ ಪಕ್ಕದಲ್ಲೇ ಇರುವ ಬೃಹತ್ ಕಟ್ಟಡಗಳ ನಿವಾಸಿಗಳಲ್ಲಿ ಆತಂಕ ಮೂಡಿದೆ. ಕಾಮಗಾರಿ ನಡೆಯುತ್ತಿರುವ […]
ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ಪರಿಶೀಲಿಸಿದ ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ: ಇಲ್ಲಿನ ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಕುಂಠಿತವಾಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಹೆದ್ದಾರಿಯಲ್ಲಿ ಸುಗಮ ಸಂಚಾರ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಸ್ಥಳ ಪರಿಶೀಲನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.