ಬನ್ನಂಜೆ: ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆ ಕಾರ್ಯಾರಂಭ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆಯು ಕಾರ್ಯಾರಂಭಗೊಂಡಿದ್ದು, ಪ್ರಸ್ತುತ ನಗರದ ಬನ್ನಂಜೆ ಹಳೇ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತದೆ. ಈ ಯೋಜನೆಯಡಿ ಮಹಿಳೆಯರ ಮೇಲಾಗುವ ದೌರ್ಜನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಆಪ್ತಸಮಾಲೋಚನೆ ಹಾಗೂ ಕಾನೂನು ಸಲಹೆಗಳ ಮೂಲಕ ಬಗೆಹರಿಸಲಾಗುವುದು. ಸದ್ರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.