ರಾಜ್ಯದ 30 ಜಿಲ್ಲೆಗಳ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹಕ್ಕೆ ಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಬ್ರಹ್ಮಾವರ: ರಾಜ್ಯದ 30 ಜಿಲ್ಲೆಗಳ 100 ಎ ದರ್ಜೆಯ ದೇವಸ್ಥಾನ ಮತ್ತು ಬಿ ಮತ್ತು ಸಿ ದೇವಸ್ಥಾನಗಳಲ್ಲೂ ಸಾಮೂಹಿಕ ವಿವಾಹಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಏಪ್ರಿಲ್ ನಲ್ಲಿ ನಡೆಯುವ ಸಪ್ತಪದಿ ಸಾಮೂಹಿಕ ಸರಳ ವಿವಾಹದ ಕಾರ್ಯಕ್ರಮದ ಬಗ್ಗೆ ಮಾಹಿತಿ ಮತ್ತು ಪ್ರಚಾರ ನೀಡವ ಸಲುವಾಗಿ ಆರಂಭಿಸಲಾದ ಸಪ್ತಪದಿ ರಥಕ್ಕೆ […]