ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ
ಹೈದರಾಬಾದ್: ತಮಿಳು ಚಿತ್ರರಂಗದಲ್ಲಿ ಪ್ರಮುಖ ಪಾತ್ರಗಳಿಗೆ ಹೆಸರಾದ ಹಿರಿಯ ನಟ ಶರತ್ ಬಾಬು ಸೋಮವಾರ ಹೈದರಾಬಾದ್‌ನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಟ ಸಾವನ್ನಪ್ಪಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಶರತ್ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ. ವರದಿಗಳ ಪ್ರಕಾರ, ಶರತ್ ಬಾಬು ಅವರು ಅನಾರೋಗ್ಯದ ಕಾರಣ ಕಳೆದ ತಿಂಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಅವರ ಸ್ಥಿತಿ ಹದಗೆಟ್ಟ ನಂತರ ಹೈದರಾಬಾದ್‌ಗೆ ಸ್ಥಳಾಂತರಿಸಲಾಯಿತು. ಇದೀಗ ಚಿಕಿತ್ಸೆ […]