ಸಾರ್ವಜನಿಕ ಸ್ಥಳದಲ್ಲಿ ಹರಿದು ಎಸೆದ ರಾಷ್ಟ್ರ ಧ್ವಜಗಳು!: ಆಕ್ರೋಶ

ಕುಂದಾಪುರ: ರಾಷ್ಟ್ರಧ್ವಜವನ್ನು ಹರಿದು ಸಾರ್ವಜನಿಕ ಸ್ಥಳದಲ್ಲಿ ಎಸೆದ ಘಟನೆ ಶುಕ್ರವಾರ ಬೆಳಿಗ್ಗೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಮುಖ್ಯ ರಸ್ತೆಯಲ್ಲಿರುವ ಕುಂದೇಶ್ವರ ದೇವಸ್ಥಾನದ ಎದುರುಗಡೆಯ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಸಂಸ್ಥೆಗೆ ಕಾದಿರಿಸಲಾದ ಸ್ಥಳದಲ್ಲಿ ರಾಷ್ಟ್ರ ಧ್ವಜವನ್ನು ಹರಿದು ಎಸೆಯಲಾಗಿದ್ದು, ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಚತುಷ್ಪತ ಹೆದ್ದಾರಿ ಕಾಮಗಾರಿಯ ಕಾರ್ಮಿಕರಾದ ಬಶೀರ್ ಹಾಗೂ ಮನೀಷ್ ಪಾಂಡೆ ಎಂಬುವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ರಸ್ತೆ ಬದಿಯ ತೆರೆದ ಮೈದಾನದಲ್ಲಿ ರಾಷ್ಟ್ರಧ್ವಜವನ್ನು ರಾಶಿಯಾಗಿ […]