ಸರ್ವಜ್ಞ ಜಯಂತಿ ಹಾಗೂ ಸಾಮಾಜಿಕ ನ್ಯಾಯ ದಿನಾಚರಣೆ
ಉಡುಪಿ: ಸರ್ವಜ್ಞ ಎಂದರೆ ಎಲ್ಲವನ್ನು ಬಲ್ಲವನು ಎನ್ನುವ ಅರ್ಥ ಇದೆ. ಯಾವುದೇ ವಿದ್ಯಾಲಯದಲ್ಲಿ ಪದವಿ ಪಡೆಯದೆ ತನ್ನ ಜೀವನ ಅನುಭವಗಳ ಮೂಲಕ ವಚನಗಳನ್ನು ರಚಿಸಿದ ಕವಿ ಸರ್ವಜ್ಞ, ಸಮಾಜದಲ್ಲಿ ಇದ್ದಂತಹ ಅಂಕು ಡೊಂಕುಗಳ ತಿದ್ದುವ ಕುರಿತು ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ತ್ರಿಪದಿಗಳ ಮೂಲಕ ವಚನಗಳನ್ನು ರಚಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಲೇಜಿನ […]
ತ್ರಿಪದಿಗಳ ಮೂಲಕ ಬದುಕಿನ ಅರಿವು ಮೂಡಿಸಿದ ಕವಿ ಸರ್ವಜ್ಞ: ವೀಣಾ ಬಿ.ಎನ್
ಉಡುಪಿ: ಸರ್ವಜ್ಞ ಕವಿಯು ತಮ್ಮ ತ್ರಿಪದಿಗಳ ಮೂಲಕ ಜೀವನದ ಅನುಭವ ಕಲಿಸಿಕೊಟ್ಟು, ಬದುಕಿನ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು. ಅವರು ಸೋಮವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ನಡೆದ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ, ಸರ್ವಜ್ಞನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸರ್ವಜ್ಞ ಎಂದರೆ ಎಲ್ಲವನ್ನು ತಿಳಿದವನು. ಸಮಾಜದ ಜ್ಞಾನವನ್ನು ಅರಿತವನು. […]