ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಐಎಎಸ್ ಸೇವೆಗೆ ರಾಜಿನಾಮೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತನ್ನ ಐಎಎಸ್ ಸೇವೆಗೆ ದಿಢೀರ್ ರಾಜಿನಾಮೆ ನೀಡಿದ್ದಾರೆ. ಐಪಿಎಸ್ ಅಣ್ಣಾಮಲೈ ಹಾದಿಯಲ್ಲೇ ಸೆಂಥಿಲ್ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ಎಂದು ತಿಳಿಸಿದ್ದಾರೆ. ಅವರು ಆಗಸ್ಟ್ 3ರಿಂದ ರಜೆಯಲ್ಲಿ ತೆರಳಿದ್ದರು ಎಂದು ತಿಳಿದು ಬಂದಿದೆ. 2017, ಅಕ್ಟೋಬರ್ ನಿಂದ ಅವರು ದ.ಕ. ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.