ಆದಾಯ ತೆರಿಗೆ ಪಾವತಿಸುವವರಿಗೆ, ಸರ್ಕಾರಿ ನೌಕರರಿಗಿಲ್ಲ ಕಾಂಗ್ರೆಸ್ ಗ್ಯಾರಂಟಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯವಾಗಲಿದ್ದು, ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಆಗುವುದಿಲ್ಲ. ನಿರ್ಗತಿಕರು ಹಾಗೂ ಬಡವರನ್ನು ಗುರುತಿಸಿ ಯೋಜನೆ ತಲುಪಿಸುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ಸ್ವಲ್ಪ ವಿಳಂಬವಾಗಬಹುದು. ಆದರೆ ಕೊಟ್ಟ ಭರವಸೆ ಈಡೇರಿಸಲು ಸರ್ಕಾರ ಬದ್ಧವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಭಾನುವಾರದಂದು ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲಮಂಟಪ ಮಠದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಚುನಾವಣೆ ಸಮಯದಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ […]