ಹಿಂದೂ ಪದವನ್ನು ಕೀಳಾಗಿ ಟೀಕಿಸಿದ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಬೆಳಗಾವಿಯ ನಿಪ್ಪಾಣಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ‘ಹಿಂದೂ’ ಎಂಬ ಪದವು ಪರ್ಷಿಯನ್ ಪದವಾಗಿದ್ದು, ಅದರ ಅರ್ಥ “ತುಂಬಾ ಕೊಳಕು” ಎಂದು ಹೇಳುವ ಮೂಲಕ ವಿವಾದವನ್ನು ಎಬ್ಬಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಇಂಧನ ಸಚಿವ ವಿ ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿ  ಪ್ರತಿಕ್ರಿಯಿಸಿರುವ ಸುನಿಲ್ ಕುಮಾರ್, ನನ್ನನ್ನು ಹಿಂದು ಎಂದು ಕರೆಯಬೇಡಿ […]