ಆಕ್ಷೇಪಾರ್ಹ ಬರಹ ಪ್ರಕಟಿಸಿದ ಆರೋಪ: ಸೌದಿಯಲ್ಲಿ ಹರೀಶ್ ಬಂಗೇರ ಬಂಧನ ಬಿಡುಗಡೆಗೆ ನೆರವು ಕೋರಿ ಕುಟುಂಬಸ್ಥರು ಎಸ್ಪಿಗೆ ಮನವಿ
ಉಡುಪಿ: ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ ಆರೋಪದ ಮೇಲೆ ಸೌದಿಅರೆಬೀಯಾದಲ್ಲಿ ಬಂಧನಕ್ಕೊಳಗಾಗಿರುವ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್ ಬಂಗೇರ ಅವರನ್ನು ಬಿಡುಗಡೆಗೊಳಿಸಲು ನೆರವು ಕೋರಿ ಕುಟುಂಬಸ್ಥರು ಎಸ್ಪಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು. ನನ್ನ ಪತಿ ಯಾವುದೇ ತಪ್ಪು ಮಾಡಿಲ್ಲ. ಕೆಲ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಪತಿಯನ್ನು ಸಮಸ್ಯೆಗೆ ಸಿಲುಕಿದ್ದಾರೆ. ಅವರ ಬಿಡುಗಡೆಗೆ ಸರ್ಕಾರ ಕೂಡಲೇ ನೆರವು ನೀಡಬೇಕು ಎಂದು ಹರೀಶ್ ಬಂಗೇರ ಅವರ ಪತ್ನಿ ಸುಮನಾ ಮನವಿ ಮಾಡಿದರು. ಹರೀಶ್ ಅವರು […]