ಉಡುಪಿ ಶ್ರೀಕೃಷ್ಣಮಠದಲ್ಲಿ ಸೌರಯುಗಾದಿ ಆಚರಣೆ
ಉಡುಪಿ: ಶ್ರೀಕೃಷ್ಣಮಠದಲ್ಲಿ ಸೌರಯುಗಾದಿಯ ಪ್ರಯುಕ್ತ ಶ್ರೀಕೃಷ್ಣ ಮುಖ್ಯಪ್ರಾಣದೇವರ ಉತ್ಸವ ನಡೆಯಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಪರ್ಯಾಯ ಮಠದ ವತಿಯಿಂದ ಚಂದ್ರಶಾಲೆಯಲ್ಲಿ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು. ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ ಇವರು ಶುಭಕೃತ್ ನಾಮ […]