ಮನೆ ನಿರ್ಮಾಣ, ಉಡುಪಿ ಜಿಲ್ಲೆಯಲ್ಲಿ ಮಳೆ ಕೊಯ್ಲು ಕಡ್ಡಾಯ: ಜಿಲ್ಲಾಧಿಕಾರಿ
ಉಡುಪಿ, ಜುಲೈ 10: ಜಲ್ಲೆಯ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಮಳೆ ನೀರು ಮರು ಪೂರಣ ಯೋಜನೆ ಕಡ್ಡಾಯ ಗೊಳಿಸಲಾಗಿದೆ. ಇಲ್ಲದಿದ್ದರೆ, ಮನೆ ನಿರ್ಮಾಣ ನಂತರ ಕಂಪ್ಲೀಷನ್ ಸರ್ಟಿಫಿಕೇಟ್(ಸಿಸಿ) ಸಿಗುವುದಿಲ್ಲ. ಭಾರತ ಸರ್ಕಾರವು ಜಲಭದ್ರತೆಗಾಗಿ “ಜಲ ಶಕ್ತಿ ಅಭಿಯಾನ” ಎಂಬ ಕಾರ್ಯಕ್ರಮವನ್ನು ರಾಜ್ಯ ಸರಕಾರಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಬುಧವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ […]