ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಭಂಡಾರಿ ಗುಡ್ಡೆಅಂಗಡಿ ರಾಜೀನಾಮೆ
ಉಡುಪಿ: ಸವಿತಾ ಸಮಾಜದ ಉಡುಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಭಂಡಾರಿ ಗುಡ್ಡೆಅಂಗಡಿ ರಾಜೀನಾಮೆ ನೀಡಿದ್ದಾರೆ. ಸವಿತಾ ಸಮಾಜದ ಜಿಲ್ಲಾಧ್ಯಕ್ಷನಾಗಿ ನನ್ನ ಕಾರ್ಯ ಅವಧಿಯಲ್ಲಿ ಸಮಾಜದ ಎಲ್ಲ ಬಂಧುಗಳ ಸಹಕಾರದಿಂದ ಸಮಾಜದ ಸಂಘಟನೆ ಮತ್ತು ವಿವಿಧ ಕಾರ್ಯ ಚಟುವಟಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ಆದರೆ ಇದೀಗ ವೈಯಕ್ತಿಕ ಕಾರಣಗಳಿಂದ ಸಂಘಟನೆಯ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಾಗದ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಭಾಸ್ಕರ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.