ಜಾತಿ-ಆಧಾರಿತ ಅವಮಾನ ಉದ್ದೇಶವಿಲ್ಲದೆ ಸಂತ್ರಸ್ತರ ಜಾತಿಯನ್ನು ಉಲ್ಲೇಖಿಸುವುದು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ/ಎಸ್‌ಟಿ) ಕಾಯ್ದೆ,1989 ರ ಅಡಿಯಲ್ಲಿ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶವಿಲ್ಲದೆ ಕೇವಲ ವ್ಯಕ್ತಿಯ ಜಾತಿಯ ಹೆಸರನ್ನು ತೆಗೆದುಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶನಿವಾರ (28 ಜನವರಿ), ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಿ ಶೈಲೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಅಂಗೀಕರಿಸಿತು ಮತ್ತು ಕಾಯಿದೆಯ ಸೆಕ್ಷನ್ 3 (1) (ಆರ್) ಮತ್ತು (ಎಸ್) ಅಡಿಯಲ್ಲಿ ಅವರ ವಿರುದ್ಧ ಹೊರಿಸಲಾದ ಆರೋಪಗಳನ್ನು ರದ್ದುಗೊಳಿಸಿತು, […]