ಗ್ಯಾರಂಟಿಗಾಗಿ ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ವರ್ಗ; ರಾಜ್ಯಾದ್ಯಂತ ಪ್ರತಿಭಟನೆ: ದಿನಕರ ಬಾಬು
ಉಡುಪಿ: ಅಧಿಕಾರಕ್ಕೆ ಏರಲೇಬೇಕೆಂಬ ಹಪಾಹಪಿಯಿಂದ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಉಚಿತಗಳ ಗ್ಯಾರಂಟಿಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದ್ದು, ಇದೀಗ ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಸುಮಾರು 11,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮಹಾ ಮೋಸ ಎಸಗಿರುವುದನ್ನು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ತೀವ್ರವಾಗಿ ಖಂಡಿಸಿದರು. ಅವರು ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಬಿಜೆಪಿ […]
ಅಮೃತ ಜ್ಯೋತಿ ಯೋಜನೆ: ಪ.ಜಾ/ಪ.ಪಂ ಬಿಪಿಎಲ್ ಕುಟುಂಬಗಳು 75 ಯೂನಿಟ್ ಉಚಿತ ವಿದ್ಯುತ್ ಗಾಗಿ ದಾಖಲೆ ಸಲ್ಲಿಸಿ
ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್) ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುವ ಅಮೃತ ಜ್ಯೋತಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಈ ಯೋಜನೆಯ ಅನುಷ್ಠಾನದ ಬಗ್ಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಾಯಿಸುವ ಕಾರ್ಯ ಪ್ರಗತಿಯಲ್ಲಿದ್ದು, ಫಲಾನುಭವಿಗಳಿಗೆ ಮಾಸಿಕ 75 ಯೂನಿಟ್‌ವರೆಗೆ ಮಾತ್ರ ಬಳಕೆಯ ವಿದ್ಯುತ್ […]
ಭಾಸ್ಕರ್ ಪಡುಬಿದ್ರಿ ಅವರಿಗೆ ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ
ಉಡುಪಿ: ಭಗವಾನ್ ಬುದ್ಧ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ಪಡೆಯುತ್ತಿರುವ ಭಾಸ್ಕರ್ ಪಡುಬಿದ್ರಿಯವರಿಗೆ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಧ್ಯಕ್ಷ ಆರ್.ಧರ್ಮಸೇನ ಇವರು ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಆಡಳಿತ ಸಂಚಾಲಕ ಬಿ.ಎಮ್. ಮುನಿರಾಜುˌ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಷಕ್ಷ ಅಶೋಕ್ ಕುಮಾರ್ ಕೊಡವೂರು, ಪರಿಶಿಷ್ಟ ಜಾತಿ ವಿಭಾಗದ ಉಡುಪಿ ಜಿಲ್ಲಾ ಅಧ್ಷಕ್ಷ ಜಯ ಕುಮಾರ್ˌ ರಾಜ್ಯ ಸಮಿತಿಯ ಪದಾಧಿಕಾರಿಗಳಾದ ದಿನೇಶ್ ˌಜಿಲ್ಲಾ ಸಮಿತಿಯ ಪದಾಧಿಕಾರಿಉಮೇಶ್ ಉಪಸ್ಥಿತರಿದ್ದರು.
ಪ.ಜಾತಿ ಮತ್ತು ಪ.ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗಕ್ಕಾಗಿ ದ್ವಿಚಕ್ರ ವಾಹನ ವಿತರಣೆ: ಕೋಟಾ ಶ್ರೀನಿವಾಸ್ ಪೂಜಾರಿ
ಉಡುಪಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ತಮ್ಮ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗಕ್ಕೆ ಅನುಕೂಲವಾಗುವಂತೆ ಸರಕು […]
ಗಂಗಾ ಕಲ್ಯಾಣ ಯೋಜನೆಯಡಿ ಪ.ಜಾತಿ/ ಪ.ಪಂಗಡದ ಕೊಳವೆ ಬಾವಿ ನಿರ್ಮಾಣಕ್ಕೆ ನೇರ ಹಣ ಪಾವತಿ: ಕೋಟ
ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿದಂತೆ 7 ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಒಟ್ಟು 17000 ಕೊಳವೆ ಬಾವಿಗಳನ್ನು ಕೊರೆಯಲು ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಅನಾರೋಗ್ಯದ ಕಾರಣ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರದಂದು ಅಲ್ಲಿಂದಲೇ ಸಮಾಜ ಕಲ್ಯಾಣ ಇಲಾಖೆಯ ವಿವಿಧ […]