ವಾಟ್ಸಾಪ್ ನಲ್ಲಿ ಅಜ್ಞಾತ ಅಂತಾರಾಷ್ಟ್ರೀಯ ಕರೆಗಳನ್ನು ಸ್ವೀಕರಿಸುವ ಮುನ್ನ ಜಾಗರೂಕರಾಗಿರಿ

ನವದೆಹಲಿ: ಬೆಳಗ್ಗಿನ ಜಾವದಿಂದ ರಾತ್ರಿವರೆಗೆ ಅಂಗೈಯಲ್ಲೇ ನಲಿದಾದುವ ವಾಟ್ಸಾಪ್ ಬಗ್ಗೆ ಹೊಸ ಹಗರಣವೊಂದು ವರದಿಯಾಗಿದೆ. ಇತ್ತೀಚೆಗೆ ಅಚಾನಕ್ ಆಗಿ ಅಂತರರಾಷ್ಟ್ರೀಯ ಸಂಖ್ಯೆಗಳಿಂದ ಕರೆಗಳು ಬರುತ್ತಿದ್ದು, ಈ ಕರೆಗಳು ಇಥಿಯೋಪಿಯಾ (+251), ಮಲೇಷ್ಯಾ (+60), ಇಂಡೋನೇಷ್ಯಾ (+62), ಕೀನ್ಯಾ (+254), ವಿಯೆಟ್ನಾಂ (+84) ಮತ್ತು ಇತರ ದೇಶಗಳಿಂದ ಬರುತ್ತಿವೆ. ಆದಾಗ್ಯೂ, ಈ ಕರೆಗಳು ಬೇರೆ ದೇಶದ ಕೋಡ್‌ನಿಂದ ಪ್ರಾರಂಭವಾಗುವುದರಿಂದ ಕರೆಯ ಮೂಲವು ವಾಸ್ತವವಾಗಿ ಆ ದೇಶವೇ ಆಗಿದೆ ಎಂದು ಅರ್ಥವಲ್ಲ. ವಾಟ್ಸಾಪ್ ಕರೆಗಳು ಇಂಟರ್ನೆಟ್ ಮೂಲಕ ರವಾನೆಯಾಗುತ್ತವೆ. ಮಾಧ್ಯಮ […]

ಕಮಲಾಕ್ಷಿ ಸಹಕಾರಿ ಸಂಘ ಬಹುಕೋಟಿ ಹಗರಣ: ಸೊಸೈಟಿ ಅಧ್ಯಕ್ಷರಿಗೆ ಜ.11ರವರೆಗೆ ನ್ಯಾಯಾಂಗ ಬಂಧನ

ಉಡುಪಿ: ಸುಮಾರು 100 ಕೋಟಿ ರೂಪಾಯಿಗೂ ಮಿಕ್ಕಿ ವಂಚನೆ ನಡೆದಿದೆ ಎನ್ನಲಾದ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ ವಿ ಲಕ್ಷ್ಮೀನಾರಾಯಣ ಅವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹಗರಣ ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ ಇವರನ್ನು ಪತ್ತೆ ಹಚ್ಚುವಲ್ಲಿ ಸೆನ್ ಪೊಲೀಸರು ಬ್ರಹ್ಮಾವರ ಸಮೀಪದ ಮಟಪಾಡಿ ಬಳಿ ಬಂಧಿಸಿದ್ದಾರೆ. ಇವರ ಮೇಲೆ ವಂಚನೆ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗದ ಮುಂದೆ ಹಾಜರು ಪಡಿಸಲಾಗಿದೆ. ಉಡುಪಿ ಜೆಎಂಎಫ್‌ಸಿ ನ್ಯಾಯಾಲಯವು ಲಕ್ಷ್ಮೀನಾರಾಯಣ ಅವರನ್ನು 2023ರ ಜನವರಿ 11ರವರೆಗೆ ನ್ಯಾಯಾಂಗ […]

ಪಿಎಸ್ಐ ನೇಮಕಾತಿ ಹಗರಣ: ಪ್ರಧಾನಿ ಮೋದಿಗೆ ರಕ್ತದಲ್ಲಿ ಬರೆದ ಅನಾಮಧೇಯ ಪತ್ರ ವೈರಲ್!

ಬೆಂಗಳೂರು : ಹಗರಣಗಳಿಂದ ಹತಾಶರಾಗಿರುವ ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಎಸ್ಐ ಅಭ್ಯರ್ಥಿಗಳು ಬರೆದಿದ್ದಾರೆ ಎನ್ನಲಾಗುವ ಈ ಪತ್ರದಲ್ಲಿ ಯಾರದ್ದೇ ಹೆಸರು ಉಲ್ಲೇಖವಾಗಿಲ್ಲ. ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಸುದ್ದಿಯ ನಡುವೆ, ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸಂಚಲನ ಮೂಡಿಸಿದೆ. ಪಿಎಸ್ ಐ ಪರೀಕ್ಷೆಯ ಅಕ್ರಮದಿಂದಾಗಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಅನ್ಯಾಯ ಮಾಡಿದವರನ್ನ ಜೈಲಿಗೆ […]

ಪಿ.ಎಸ್.ಐ ಪರೀಕ್ಷೆ ನೇಮಕಾತಿ ರದ್ದು, ಮರು ಪರೀಕ್ಷೆಗೆ ತೀರ್ಮಾನ

ಬೆಂಗಳೂರು: 545 ಪಿ.ಎಸ್.ಐ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷಾ ನೇಮಕಾತಿಯನ್ನು ರದ್ದುಪಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆರೋಪಿಗಳನ್ನು ಹೊರತುಪಡಿಸಿ, ಉಳಿದವರಿಗೆ ಶೀಘ್ರವೇ ಮರು ಪರೀಕ್ಷೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ. ಇದಲ್ಲದೆ ಇನ್ನಿತರ ಆರೋಪಿಗಳಾದ ಅರ್ಚನಾ, ದಿವ್ಯಾ, ಚಾಲಕ ಸದ್ದಾಂ, ಸುನಂದಾರನ್ನು ಪುಣೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇವರೆಲ್ಲರನ್ನೂ ರಾಜ್ಯಕ್ಕೆ ಕರೆತರಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ಅವ್ಯವಹಾರ ನಡೆದಿರುವುದು […]

ಪಿಎಸ್ಐ ಪರೀಕ್ಷೆ ಅಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ ಬಂಧಿಸಿ ತನಿಖೆ ನಡೆಸುವಂತೆ ಕುಯಿಲಾಡಿ ಆಗ್ರಹ

ಉಡುಪಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಮಾಜಿ ಸಚಿವ ಕಾಂಗ್ರೆಸ್ ಶಾಸಕ‌ ಪ್ರಿಯಾಂಕ್ ಖರ್ಗೆ ತನ್ನ ಬಳಿ ಇದ್ದ ಆಡಿಯೋವನ್ನು ವಿಳಂಬವಾಗಿ ಬಿಡುಗಡೆ ಮಾಡಿದ‌ ಮರ್ಮ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಸಿಐಡಿ ವಿಶೇಷ ಘಟಕಕ್ಕೆ ಸಹಕರಿಸದಿದ್ದಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸರಕಾರವನ್ನು ಆಗ್ರಹಿಸಿದ್ದಾರೆ. ಸದ್ರಿ ಪ್ರಕರಣದಲ್ಲಿ ಕಾಂಗ್ರೆಸ್ ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿದೆ. […]