21 ಡಿಸಿಸಿ ಬ್ಯಾಂಕ್ ಗಳಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ಒಂದನೇ ಸ್ಥಾನದಲ್ಲಿದೆ: ಎಸ್.ಟಿ ಸೋಮಶೇಖರ್
ಮಂಗಳೂರು: ಎಲ್ಲಾ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದ್ದು, ಸಹಕಾರ ಕ್ಷೇತ್ರದಲ್ಲಿ ಭಾರತದಲ್ಲಿಯೆ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ. ಇಲ್ಲಿ ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಕ್ಷೇತ್ರ ಜೀವಂತವಾಗಿರುವುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ […]
ಮಂಗಳೂರು: ಉಡುಪಿ ಎಕ್ಸ್ಪ್ರೆಸ್ ‘ಸಹಕಾರ ಸೌರಭ ‘ ವಿಶೇಷ ಸಂಚಿಕೆ ಬಿಡುಗಡೆ
ಮಂಗಳೂರು: ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಉಡುಪಿ ಎಕ್ಸ್ಪ್ರೆಸ್ ವೆಬ್ ಸೈಟ್ ನ ‘ಸಹಕಾರ ಸೌರಭ’ ವಿಶೇಷ ಸಂಚಿಕೆಯನ್ನು ಗುರುವಾರದಂದು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಬ್ಯಾಂಕ್ ನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ, ಜೈರಾಜ್ ಬಿ ರೈ, ರವೀಂದ್ರ […]
ಮಣಿಪಾಲ: ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ 7ನೇ ಎಟಿಎಂ ಶಾಖೆ ಉದ್ಘಾಟನೆ
ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಮಣಿಪಾಲ ಬ್ಯಾಂಕಿನ ನೂತನ ಎಟಿಎಂ ಶಾಖೆ ಭಾನುವಾರದಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್ ನ ನೆಲ ಅಂತಸ್ತಿನಲ್ಲಿ ಉದ್ಘಾಟನೆಗೊಂಡಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಎಟಿಎಂ ಅನ್ನು ಉದ್ಘಾಟಿಸಿ ಮಾತನಾಡಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಆಸ್ತಿಯೆಂದರೆ ಅದು ನವೋದಯ ಸ್ವ-ಸಹಾಯ ಸಂಘದ ಮಹಿಳೆಯರು. ಎಸ್.ಸಿ.ಡಿ.ಸಿ.ಸಿಯು ಎಲ್ಲಾ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಗಿಂತ ಹೆಚ್ಚು ಬಡ್ಡಿಯನ್ನು (8%) ಠೇವಣಿದಾರರಿಗೆ […]
ಉಡುಪಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ 2021-22 ನೇ ಸಾಲಿನ ಸಾಧನಾ ಪ್ರಶಸ್ತಿ
ಉಡುಪಿ: 2021-22 ನೇ ಸಾಲಿನ ವ್ಯವಹಾರದಲ್ಲಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಸಾಧಿಸಿರುವ ಸರ್ವತೋಮುಖ ಪ್ರಗತಿಗೆ ಮೆಚ್ಚುಗೆಯ ಸಂಕೇತವಾಗಿ 2021-22 ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಮಂಜುನಾಥ ಶೆಟ್ಟಿ ಇವರನ್ನು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ ಸನ್ಮಾನಿಸಿ 2021-22 ನೇ ನೇ ಸಾಲಿನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ […]
ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘಕ್ಕೆ 2021-22 ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ
ಮಂಗಳೂರು: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ಉಡುಪಿ ಇವರಿಗೆ 2021-22 ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ ನೀಡಲಾಯಿತು. ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಹಗಾರರು ಹಾಗೂ ಸರ್ವ ಸದಸ್ಯರ ಪರವಾಗಿ ಸಂಘದ ಅಧ್ಯಕ್ಷ ದಿನೇಶ್ ಸಿ ನಾಯ್ಕ್ ಮತ್ತು […]