ಮಂಗಳೂರು: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ 112ನೇ ಶಾಖೆ ಉದ್ಘಾಟನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ112ನೇ ಶಾಖೆಯು ಸ್ಯಾಂಡ್ ಪಿಟ್ ಬೆಂಗ್ರೆಯಲ್ಲಿ ಕಾರ್ಯಾರಂಭಗೊಂಡಿದ್ದು ಇದರ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ನಡೆಸಿದರು. ಬಳಿಕ ಮಾತನಾಡಿದ ಅವರು, ಬೆಂಗ್ರೆಯ ಜನರು ಬ್ಯಾಂಕ್ ಕೆಲಸ ಕಾರ್ಯಗಳಿಗೆ ಹೋಗಬೇಕಿದ್ದರೆ ಪಣಂಬೂರು, ಕೂಳೂರು, ಸ್ಟೇಟ್ ಬ್ಯಾಂಕ್ ಕಡೆಗೆ ಬಸ್ಸು ಇಲ್ಲವೇ ದೋಣಿಯ ಮೂಲಕ ಸಂಚಾರ ನಡೆಸಬೇಕಿತ್ತು. ಇದರಿಂದ ಸಮಯ ಮತ್ತು ಹಣ ಎರಡೂ ವ್ಯರ್ಥವಾಗುತ್ತಿತ್ತು. ಈ ಸಂದರ್ಭದಲ್ಲಿ ಬೆಂಗ್ರೆಯ […]
ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ.ಗೆ ಸಾಧನಾ ಪ್ರಶಸ್ತಿ
ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ., 2022-23ನೇ ಸಾಲಿನಲ್ಲಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ದಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇವರಿಂದ ಗುರುತಿಸಲ್ಪಟ್ಟು ಸಾಧನಾ ಪ್ರಸ್ತಿಗೆ ಭಾಜನವಾಗಿದೆ. ಆ.19 ರಂದು ನಡೆದ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷ ಅಲೋಶಿಯಸ್ ಡ್ ಅಲ್ಮೇಡಾ, ಉಪಾಧ್ಯಕ್ಷ ಲೂವಿಸ್ ಲೋಬೋ ಮತ್ತು ಸಿಇಓ ಸಂದೀಪ್ ಫೆರ್ನಾಂಡೀಸ್ ಇವರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ […]
ಸತತ ಮೂರನೇ ಬಾರಿಗೆ ಸಾಧನಾ ಪ್ರಶಸ್ತಿ ಪಡೆದ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ
ಉಡುಪಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿ SCDCC ಬ್ಯಾಂಕ್ ನ ಸಾಧನಾ ಪ್ರಶಸ್ತಿ ನೀಡಲಾಯಿತು. ಆ. 19 ರಂದು ನಡೆದ SCDCC ಬ್ಯಾಂಕ್ ನ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಚಂದ್ರಶೇಕರ್. ಕೆ ಹಾಗೂ ಸಿ.ಇ.ಒ ಪದ್ಮನಾಭ್ .ಎಂ ಇವರನ್ನು ಸನ್ಮಾನಿಸಿ ಬ್ಯಾಂಕ್ ನ ಅಧ್ಯಕ್ಷರಾಜೇಂದ್ರ ಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸೊಸೈಟಿಯು ಕಳೆದ 3 ವರ್ಷದಿಂದ ಈ ಪ್ರಶಸ್ತಿಯನ್ನು ಪಡೆಯುತ್ತಿದೆ.
ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ದಶಮಾನೋತ್ಸವ, ಅಂಪಾರು ಶಾಖೆ ಉದ್ಘಾಟನೆ
ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ದಶಮಾನೋತ್ಸವ ಸಂಭ್ರಮ ಹಾಗೂ ಅಂಪಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡ ಅಂಪಾರು ಶಾಖೆಯ ಉದ್ಘಾಟನೆ ಸೋಮವಾರ ನಡೆಯಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಶಾಖೆಯನ್ನು ಉದ್ಘಾಟಿಸಿ ಶುಭಹಾರೈಸಿ ಮಾತನಾಡಿ, ಯಾವುದೇ ಸಹಕಾರಿ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯಲು ಗ್ರಾಹಕರ ಸಹಕಾರ ಬಹಳ ಮುಖ್ಯ. ಸಿಬ್ಬಂದಿ ಮತ್ತು ಗ್ರಾಹಕರ ಉತ್ತಮ ಬಾಂಧವ್ಯದಿಂದ ಸಂಘವು ಒಳ್ಳೆಯ ರೀತಿಯಲ್ಲಿ ಮುನ್ನಡೆಯಲು ಸಾಧ್ಯ ಎಂದರು. ಭದ್ರತಾ ಕೋಶವನ್ನು ಉದ್ಘಾಟಿಸಿದ […]
ಶೇಕಡಾ 100 ಸಾಲ ವಸೂಲಾತಿ ಸಾಧನೆ: ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಪ್ರಶಸ್ತಿ
ಉಡುಪಿ: ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಮತ್ತೆ ಪ್ರಶಸ್ತಿ ದೊರೆತಿದೆ. ಶೇಕಡಾ 100 ಸಾಲ ವಸೂಲಾತಿಯಲ್ಲಿ ನಿರಂತರವಾಗಿ ಹಲವಾರು ವರ್ಷಗಳಿಂದ ಪ್ರಶಸ್ತಿಯನ್ನು ಗಳಿಸಿಕೊಂಡು ಬಂದ ನೆಲ್ಲಿಕಾರು ವ್ಯವಸಾಯ ಸಹಕಾರ ಸಂಘವು ಈ ಬಾರಿ ಮತ್ತೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಮಾಪಾಲು ಜಯವರ್ಮ ಜೈನ್ ಮತ್ತು ಕಾರ್ಯನಿರ್ವಹಣಾಧಿಕಾರಿ ಜಯರಾಜ್ ಇವರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಮ್. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.