ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ಶಾಖೆಯ ಉದ್ಘಾಟನೆ, ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ

ಮಣಿಪಾಲ: ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ನೂತನ ಶಾಖೆಯು ಇದೇ ಬರುವ ಮೇ 2ರಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿ ಕಾರ್ಯಾರಂಭಗೊಳ್ಳಲಿದೆ. ಇದು ಸಂಪೂರ್ಣ ಗಣಕೀಕೃತಗೊಂಡ ಹವಾನಿಯಂತ್ರಿತ ಶಾಖೆಯಾಗಿದ್ದು, ಆರ್‌ಟಿಜಿಎಸ್, ನೆಫ್ಟ್, ಎಟಿಎಂ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯವನ್ನು ಒಳಗೊಂಡಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 2ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ […]

ರಾಜೇಂದ್ರ ಕುಮಾರ್‌ ಸಹಕಾರಿ ಬಳಗಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಸಂಸ್ಥೆಗೆ ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಸಹಕಾರಿ ಬಳಗದ 6 ಮಂದಿ ಅವಿರೋಧವಾಗಿ ಸೇರಿ 8 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕಿನ ಪ್ರಾ.ಕೃ. ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನೀಲಯ ಎಂ. ಅಗರಿ, ಜಿಲ್ಲೆಯ ಮಾರಾಟ ಸಹಕಾರಿ ಸಂಘಗಳ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರಿ […]

‘ಇಫ್ಕೊ’ ನಿರ್ದೇಶಕರಾಗಿ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಆಯ್ಕೆ

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಹೊಸದಿಲ್ಲಿಯ ಇಂಡಿಯನ್‌ ಫಾರ್ಮರ್ಸ್‌ ಫರ್ಟಿ ಲೈಸರ್‌ ಕೋ-ಆಪರೇಟಿವ್‌ (ಇಫ್ಕೊ) ಸಂಸ್ಥೆಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಸದಿಲ್ಲಿಯಲ್ಲಿ ಮೇ. 10ರಂದು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನಡೆದಿತ್ತು. ಪ್ರಸ್ತುತ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ.ಯ ಅಧ್ಯಕ್ಷರಾಗಿದ್ದಾರೆ. ಅವರು ದೇಶದ ಅತೀ ದೊಡ್ಡ ಸಹಕಾರಿ ಸಂಸ್ಥೆ ಇಫ್ಕೊದಲ್ಲಿ ರಾಜ್ಯದ ಪ್ರತಿನಿಧಿಯಾಗಿದ್ದಾರೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಕಟನೆ […]