ಎಸ್‌ಸಿಡಿಸಿಸಿ ಬ್ಯಾಂಕ್‌: ಸಾರ್ವಕಾಲಿಕ ಗರಿಷ್ಠ 30.29 ಕೋ.ರೂ. ಲಾಭ: ಮಹಾಸಭೆಯಲ್ಲಿ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ  ಬ್ಯಾಂಕ್‌ 2018-19ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ 30.29 ಕೋ .ರೂ. ಲಾಭ ಗಳಿಸಿದ್ದು ಸದಸ್ಯ ಸಂಘಗಳಿಗೆ ಶೇ. 9 ಡಿವಿಡೆಂಡ್‌ ಅನ್ನು ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ್ದಾರೆ. ಬ್ಯಾಂಕಿನ ಸಭಾಭವನದಲ್ಲಿ ಶನಿವಾರ ನಡೆದ 105ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ದಿನೇ ದಿನೇ ಸ್ಪರ್ಧೆಯನ್ನು ಎದುರಿಸಿದರೂ ಬ್ಯಾಂಕ್‌ ದೇಶದ ಅಗ್ರಮಾನ್ಯ ಸಹಕಾರಿ ಬ್ಯಾಂಕ್‌ ಎನಿಸಿಕೊಂಡಿದೆ […]