ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ.ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ

ಉಡುಪಿ, ಮೇ 21: 2019-20 ರಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನದಲ್ಲಿ ಶೇ.60 -74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7000 ರೂ.ಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15000 ರೂ. ಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್‍ಸೈಟ್ […]