ಅಂಬಲಪಾಡಿ ಜಂಕ್ಷನ್ ನಲ್ಲಿ ರಸ್ತೆ ಅಫಘಾತ: ಸೈಂಟ್ ಸಿಸಿಲಿ ಹೈಸ್ಕೂಲ್ ಬಾಲಕನ ಸ್ಥಿತಿ ಗಂಭೀರ
ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಫಘಾತ ಒಂದರಲ್ಲಿ ಸೈಂಟ್ ಸಿಸಿಲಿಯ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಪಿ. ಶೆಟ್ಟಿಗಾರ್ ತೀವ್ರವಾಗಿ ಗಾಯಗೊಂಡಿದ್ದಾನೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಆಪತ್ಭಾಂಧವ ವಿಶು ಶೆಟ್ಟಿ ಅಂಬಲಪಾಡಿ, ಸಾರ್ವಜನಿಕರ ನೆರವಿನಿಂದ ಬಾಲಕನನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿರುವ ಬಗ್ಗೆ ಮಾಹಿತಿ ಇಲ್ಲದ ಕಾರಣ ಆದಿತ್ಯ ತನ್ನ ಸೈಕಲ್ ಮೂಲಕ ಶಾಲೆಗೆ […]