ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಟ್ಟಡಗಳ ಕುರಿತು ವರದಿ ನೀಡಿ- ಸಿಇಓ

 ಉಡುಪಿ: ಜಿಲ್ಲೆಯಲ್ಲಿನ ಎಲ್ಲಾ ಸರಕಾರಿ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ವರದಿ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾತಿ ಸಿಂಧೂ ಬಿ ರೂಪೇಶ್ ಸೂಚಿಸಿದ್ದಾರೆ.     ಅವರು, ಬುದವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜುಲೈ ತಿಂಗಳ ಕೆಡಿಪಿ ಸಭೆಯಲ್ಲಿ ಮಾತನಾಡಿದರು.     ಈ ಬಾರಿಯ ಮಳೆಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ 9 ಶಾಲಾ ಕಟ್ಟಡಗಳಿಗೆ ಹಾನಿಯಾಗಿರುವ  ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ […]