ಡಿ. 5 ರಿಂದ 1ರಿಂದ 15 ವರ್ಷದ ಮಕ್ಕಳಿಗೆ ಜಿ.ಇ ಲಸಿಕಾ ಅಭಿಯಾನ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 1 ವರ್ಷದಿಂದ 15 ವರ್ಷದ ಮಕ್ಕಳ ಜೆ.ಇ ಲಸಿಕಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆಯು ಡಿಸೆಂಬರ್ 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ (ಬೋರ್ಡ್ ಹೈಸ್ಕೂಲ್) ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.