ಉಡುಪಿ: ಸೆ.1ರಿಂದ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಆರಂಭ; ಸಚಿವ ವಿ. ಸುನಿಲ್ ಕುಮಾರ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಇಳಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 1ರಿಂದ 9ರಿಂದ 12ನೇ ತರಗತಿಯವರೆಗಿನ ಶಾಲಾ ಕಾಲೇಜುಗಳನ್ನು ತೆರೆಯಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಸೆ.1ರಿಂದ 9ರಿಂದ 12 ತರಗತಿಯವರೆಗೆ ಶಾಲಾ ಕಾಲೇಜು ಪುನರಾರಂಭವಾಗಲಿದೆ. ಕೋವಿಡ್ ನಿಯಮಾನುಸಾರ ತರಗತಿ ಆರಂಭವಾಗಲಿದ್ದು, ಶಿಕ್ಷಕರಿಗೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಶಿಕ್ಷಕರು ಮಾತ್ರ ಮಕ್ಕಳಿಗೆ ಬೋಧನೆ […]