ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿ; ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ
ಕಾರ್ಕಳ: ರಾಜ್ಯ ಹೆದ್ದಾರಿಯ ಪಾಜೆಗುಡ್ಡ ತಿರುವಿನಲ್ಲಿ ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ ಹೊಡೆದ ಘಟನೆ ವರದಿಯಾಗಿದೆ. ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಇಂದು ಈ ಘಟನೆ ನಡೆದಿದ್ದು, ಬಸ್‌ನಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಪ್ರೌಢಶಾಲೆಯೊಂದರ ವಿದ್ಯಾರ್ಥಿಗಳಿದ್ದರು. ಇಲ್ಲಿನ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳ ಬಸ್ ಶಾಲಾ ಪ್ರವಾಸ ನಿಮಿತ್ತ ಈ ಹೆದ್ದಾರಿಯಲ್ಲಿ ಸಾಗುತ್ತಿತ್ತು. ದುರಾದೃಷ್ಟವಶಾತ್ ಮಕ್ಕಳ ಬಸ್ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವರದಿಗಳ ಪ್ರಕಾರ ಘಟನೆಯಲ್ಲಿ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಪ್ರಮಾಣದ […]