ಅ. 25ರಿಂದ 1ನೇ ತರಗತಿಯಿಂದಲೇ ಶಾಲೆ ಆರಂಭ

ಬೆಂಗಳೂರು: ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ಇದೇ 25ರಿಂದ ಶಾಲಾ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಖಚಿತಪಡಿಸಿದ್ದು, ಮೊದಲ ಐದು ದಿನ ಅರ್ಧದಿನ ತರಗತಿ ಇರಲಿದೆ. ನ.1ರಿಂದ ಪೂರ್ಣಪ್ರಮಾಣದಲ್ಲಿ ಶಾಲೆ ಆರಂಭವಾಗಲಿದೆ. ನವೆಂಬರ್ ನಲ್ಲಿ‌ ಮಧ್ಯಾಹ್ನ ಬಿಸಿಯೂಟ ಕೂಡ ಶುರುವಾಗಲಿದೆ ಎಂದು ತಿಳಿಸಿದರು. ಈ ಸಂಬಂಧ ಮಾರ್ಗಸೂಚಿ ಹೊರಡಿಸಲಾಗಿದ್ದು, ಕೋವಿಡ್‌ ಮಾರ್ಗಸೂಚಿ ಪಾಲಿಸಿ ಶಾಲೆಗಳನ್ನು ಆರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ತರಗತಿಗಳಿಗೆ ವಿದ್ಯಾರ್ಥಿಗಳು […]