ಶಾಲಾ ಬಾಲಕಿ‌ ಮೇಲೆ‌ ಅತ್ಯಾಚಾರ: ಪುತ್ತೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಪುತ್ತೂರನ್ನು ಬೆಚ್ಚಿಬೀಳುವಂತೆ ಮಾಡಿದೆ. ಪುತ್ತೂರಿನ ಪಾಪೆಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಸ್ಥಳೀಯ ನಿವಾಸಿ ವಿವಾಹಿತ ಅಜಿತ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿ‌ಯನ್ನು ಚಿಕಿತ್ಸೆಗಾಗಿ‌ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಆಸ್ಪತ್ರೆಗೆ ದಾಖಲಾಗಿದ್ದ […]