ಸೆ. 21ರಿಂದ ಶಾಲೆಗಳನ್ನು ತೆರೆದರೂ ತರಗತಿಗಳನ್ನು ಆರಂಭಿಸುವುದಿಲ್ಲ- ಸುರೇಶ ಕುಮಾರ್
ಮೈಸೂರು: ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳನ್ನು ಮಾತ್ರ ತೆರೆಯಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಸೂಕ್ತ ಮಾರ್ಗಸೂಚಿ ಬರುವವರೆಗೆ ತರಗತಿಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಇಂದು ಮೈಸೂರಿನಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಬೇಕು. ಕೇವಲ ಒಂದು ಟರ್ಮ್ ಫೀಸ್ ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಆಗೊಮ್ಮೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. […]