ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಆರಂಭ

ಬೆಂಗಳೂರು: ಮೇ29 ರಿಂದ ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಈಗಾಗಲೇ ಕೆಲ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಅಧಿಕೃತವಾಗಿ ಮೇ.29ರ ಸೋಮವಾರದ ನಾಳೆಯಿಂದ ಸರ್ಕಾರಿ, ಅನುದಾನಿತ ಶಾಲೆಗಳು ತೆರೆಯಲಿದ್ದೆ. 2023-24ನೇ ಸಾಲಿನಲ್ಲಿ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ.29ರ ದಿನಾಂಕವನ್ನು ನಿಗದಿ ಪಡಿಸಿತ್ತು. ಅದರಂತೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ಮತ್ತು ಶಾಲೆ ಆರಂಭಕ್ಕೂ […]