ಶಾಲಾ ಪಠ್ಯ ಪುಸ್ತಕ ವಿವಾದ: ಸರಿಪಡಿಸಿದ ಪಠ್ಯ ಪುಸ್ತಕಗಳನ್ನು ಉಚಿತ ಬುಕ್‌ಲೆಟ್ ರೂಪದಲ್ಲಿ ನೀಡಲು ನಿರ್ಧಾರ

ಬೆಂಗಳೂರು: ಪಠ್ಯಪುಸ್ತಕದಲ್ಲಿ ಕಂಡು ಬಂದ ತಪ್ಪುಗಳನ್ನು ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಿ ವಿತರಣೆ ಮಾಡಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಹೊಸ ಪಠ್ಯಪುಸ್ತಕಗಳನ್ನು ಮುದ್ರಿಸಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಬುಕ್ ಲೆಟ್ ರೂಪದಲ್ಲಿ ವಿತರಿಸಲು ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯು ತೀರ್ಮಾನಿಸಿದೆ. ತಿದ್ದುಪಡಿ ಮಾಡಿದ ಅಂಶಗಳ ಸಾಫ್ಟ್‌ ಪ್ರತಿಗಳನ್ನು ಜಾಲತಾಣದಲ್ಲಿ ಪ್ರಕಟಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳಲ್ಲಿ ಬಿಟ್ಟುಹೋದ ಅಂಶಗಳನ್ನು […]

ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ: ತಮಿಳುನಾಡು ಮೂಲದ 17 ವರ್ಷದ ಬಾಲಕ ಇ-ಮೇಲ್ ಗಳ ಮಾಸ್ಟರ್ ಮೈಂಡ್?

ಬೆಂಗಳೂರು: ಇದೇ ವರ್ಷ ಏಪ್ರಿಲ್ ನಲ್ಲಿ ಬೆಂಗಳೂರಿನ 10ಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ, ಹುಸಿ ಬಾಂಬ್ ಕರೆ‌ ಪ್ರಕರಣದಲ್ಲಿ ಹೊಸ ಮಾಹಿತಿ ಲಭ್ಯವಾಗಿದೆ. 17 ವರ್ಷದ ಬಾಲಕ ಸಿದ್ದಪಡಿಸಿದ್ದ ಸಾಫ್ಟ್ ವೇರ್ ಪ್ರೋಗ್ರಾಂ ಬಳಸಿ ಹುಸಿ ಬಾಂಬ್ ಇ-ಮೇಲ್ ಕಳುಹಿಸಿರುವುದಾಗಿ ತಿಳಿದುಬಂದಿದೆ. ತಮಿಳುನಾಡು ಮೂಲದ 17 ವರ್ಷದ ಬಾಲಕನೊಬ್ಬ ಇ-ಮೇಲ್ ಗಳ ಮಾಸ್ಟರ್ ಮೈಂಡ್ ಆಗಿದ್ದಾನೆ ಎನ್ನಲಾಗಿದೆ. ಹುಸಿ ಬಾಂಬ್ ಕರೆಯ ಕೆಲ‌ದಿನಗಳ ಹಿಂದೆ ಭೋಪಾಲ್ ನ ಕೆಲ ಶಾಲೆಗಳಿಗೂ ದುಷ್ಕರ್ಮಿಗಳು ಇಮೇಲ್ […]

ಭಾರೀ ಮಳೆ: ಅಗತ್ಯವಿರುವೆಡೆ ಶಾಲೆಗಳಿಗೆ ರಜೆ ಸಾರಲು ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಅಗತ್ಯ ಇರುವಲ್ಲಿ ಆಯಾ ಶಾಲಾ ಹಂತದಲ್ಲೇ ರಜೆ ಸಾರಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ.

ಧಾರಾಕಾರ ಮಳೆ: ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಮಂಗಳೂರು:- ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಏರುತ್ತಿರುವ ತಾಪಮಾನ: ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲವೆಂದ ಶಿಕ್ಷಣ ಸಚಿವ

ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ತಾಪಮಾನವು ದಿನೇ ದಿನೇ ಏರುತ್ತಿದ್ದು, ಅದಾಗ್ಯೂ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವರ್ಷದ ಆರಂಭವನ್ನು ಮುಂದೂಡುವ ಬಗ್ಗೆ ಪರಿಗಣಿಸುವಂತೆ ವಿಧಾನ ಪರಿಷತ್ತಿನ ಕೆಲವು ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕೋರಿದ್ದಾರೆ. “ಸರ್ಕಾರದ ಮುಂದೆ ಅಂತಹ ಯಾವುದೇ […]