ವಿಜ್ಞಾನಿಗಳ ಪಟ್ಟಿಯಲ್ಲಿ ವಿಶ್ವದ ಉತ್ತಮ ಪ್ರಾಧ್ಯಾಪಕರಿಗೆ ಜಾರ್ಖಂಡ್​ನ​ 47 ಸ್ಥಾನ

ರಾಂಚಿ (ಜಾರ್ಖಂಡ್‌): ವಿಶ್ವದ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಜಾರ್ಖಂಡ್​ನ​ ಹೆಚ್ಚಿನ ಸಂಖ್ಯೆಯ ಪ್ರಾಧ್ಯಾಪಕರು ಹೆಸರು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸಿದ ವಿಶ್ವದ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಜಾರ್ಖಂಡ್​ನ​ 47 ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ. ರಾಜ್ಯದ ವಿವಿಧ ಸಂಸ್ಥೆಗಳ 47 ಪ್ರಾಧ್ಯಾಪಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಒಟ್ಟಾರೆ ಈ ಪಟ್ಟಿಯಲ್ಲಿರುವ ವಿಜ್ಞಾನಿಗಳಲ್ಲಿ ಶೇ.2ರಷ್ಟು ಜಾರ್ಖಂಡ್​ನಿಂದಲೇ ಪ್ರತಿನಿಧಿಸುತ್ತಿದ್ದಾರೆ ಎಂಬುವುದೇ ಗಮನಾರ್ಹವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಪಟ್ಟಿಯಲ್ಲಿ ಜಾರ್ಖಂಡ್‌ನಿಂದ 47 ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ. […]