ಕೋವಿಡ್19 ಹಿನ್ನೆಲೆ: ಸ್ಕೌಟ್ಸ್- ಗೈಡ್ಸ್ ನಿಂದ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ಕೋವಿಡ್-19 ಹಿನ್ನೆಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದೆ. ಪ್ರತಿ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಪಥ ಸಂಚಲನ, ಸ್ವಚ್ಛತಾ ಕಾರ್ಯಕ್ರಮ, ಸರ್ವ ಧರ್ಮ ಪ್ರಾರ್ಥನೆ ಮುಂತಾದ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ ಕೊರೊನಾದಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಇರುವುದರಿಂದ ಮಕ್ಕಳು ಮನೆಯಲ್ಲಿಯೇ ವಿಶಿಷ್ಟವಾದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಚಟುವಟಿಕೆಗಳನ್ನು ನೀಡಿದೆ. ಚಟುವಟಿಕೆ -1: ಮನೆಯ […]