ಎಸ್.ಡಿ.ಎಂ.ಸಿ ವತಿಯಿಂದ ಶಿಕ್ಷಕಿಯರಿಗೆ ಸನ್ಮಾನ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಇಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಶಿಕ್ಷಕಿಯರಾದ ಶ್ಯಾಮಲಾ ಮತ್ತು ಸತ್ಯವತಿಯವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಶಾಮಲಾ ಪ್ರಭು ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತ್ಯಾನಂದ ನಾಯಕ್ ಸ್ವಾಗತಿಸಿ ಮಾತನಾಡಿ, ಶಿಕ್ಷಕಿಯರ ಸೇವೆ , ಗ್ರಾಮಸ್ಥರೊಂದಿಗಿನ ಒಡನಾಟ, ಶಾಲೆಯ ಮೇಲೆ ಅವರಿಗಿರುವ ಅಭಿಮಾನದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಸಿ ಆರ್ ಪಿ ಪ್ರದೀಪ್ ಕುಮಾರ್, ಶಾಲಾ ಹಿತೈಷಿ ಹರೀಶ್ […]