ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳಿಗೆ ನಿಷೇಧದ ತೂಗುಗತ್ತಿ: ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ‘ಡಿ.ಜೆ.ಹಳ್ಳಿ ಗಲಭೆ ಸೇರಿದಂತೆ ಹಲವು ಗಲಭೆಗಳು ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿವೆ ಎಂಬ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕೆಂಬ ವಿಷಯ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲುದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಎಸ್‌ಡಿಪಿಐ ಕೆಲವು ಪ್ರಮುಖರನ್ನು ಬಂಧಿಸಲಾಗಿದೆ. ಈ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಚಿವರು, ಬಿಜೆಪಿ ಶಾಸಕರು ಹಾಗೂ ಹಿಂದೂ ಸಂಘಟನೆಗಳು ಒತ್ತಡ ಹಾಕಿವೆ. ಆದರೆ, ಸಚಿವ ಸಂಪುಟ ಸಭೆಯ […]