ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂರು ಪ್ರಮುಖ ಆರೋಪಿಗಳ ಬಂಧನ; ಒಟ್ಟು ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯು ಒಂದು ಪೂರ್ವ ನಿಯೋಜಿತ ಷಡ್ಯಂತ್ರದ ಭಾಗವೆಂದು ಮುಖ್ಯಮಂತ್ರಿ ಬೊಮ್ಮಾಯಿ ಉಲ್ಲೇಖಿಸುತ್ತಲೇ ಬಂದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಎರಡು ವಾರಗಳು ಕಳೆದಿದ್ದು, ದಿನಗಳ ಅಂತರದಲ್ಲಿ ಬಂಧನಗಳು ನಡೆಯುತ್ತಲೇ ಇವೆ. ಇದೀಗ ಪ್ರವೀಣ್ ಹತ್ಯೆಗೆ ಸಂಬಂಧಿಸಿ ಸುಳ್ಯದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿಯಾಬುದ್ದೀನ್ ಅಲಿ, ರಿಯಾಜ್ ಹಾಗೂ ಎಲಿಮಲೆಯ ಬಶೀರ್ ಬಂಧಿತರು ಎಂದು ವರದಿಯಾಗಿದೆ. ಈ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ […]
ಪ್ರವೀಣ್ ಹತ್ಯೆ ಹಿನ್ನೆಲೆ: ಶಂಕಿತ ಏಳು ಎಸ್.ಡಿ.ಪಿ.ಐ ಕಾರ್ಯಕರ್ತರು ವಶಕ್ಕೆ
ಸುಳ್ಯ: ಹಿಂದೂ ಕಾರ್ಯಕರ್ತ, ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಂಕೆಯ ಹಿನ್ನಲೆಯಲ್ಲಿ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ತಡರಾತ್ರಿ ಕಾರ್ಯಕರ್ತರ ಮನೆಗೆ ಆಗಮಿಸಿದ ಪೊಲೀಸರು ಎಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಶಕ್ಕೆ ಪಡೆದ ಎಲ್ಲಾ ಏಳು ಕಾರ್ಯಕರ್ತರು ಬೆಳ್ಳಾರೆ ಪರಿಸರದ ನಿವಾಸಿಗಳು ಎಂದು ತಿಳಿದು ಬಂದಿದೆ. […]