ಪಡುಬಿದ್ರೆ: ಬ್ಲ್ಯೂ ಫ್ಲ್ಯಾಗ್ ಬೀಚ್‍ನಲ್ಲಿ ತೀವ್ರ ಕಡಲ್ಕೊರೆತ; ಸಮುದ್ರ ಪಾಲಾದ ರಕ್ಷಣಾ ಗೋಡೆ

ಪಡುಬಿದ್ರೆ: ಪಡುಬಿದ್ರೆ ಎಂಡ್ ಪಾಯಿಂಟ್ ನಲ್ಲಿರುವ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಫ್ಲ್ಯಾಗ್ ಬೀಚ್‍ನಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಬೀಚ್ ಅಭಿವೃದ್ಧಿಗಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆ, ವಾಚಿಂಗ್ ಟವರ್ ಪಕ್ಕದಲ್ಲಿ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಪ್ರವಾಸಿಗರ ಅನುಕೂಲತೆಗಾಗಿ ಅಳವಡಿಸಿದ ಗುಡಿಸಲು, ಗಿಡ ಮರಗಳು, ಲೈಟ್ ಕಂಬಗಳು, ಪೈಪ್‍ಲೈನ್ ಎಲ್ಲವೂ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. ರಕ್ಷಣೆಗಾಗಿ ಕಟ್ಟಿದ ಕಲ್ಲಿನ ಕಟ್ಟೆ ಕೊಚ್ಚಿಕೊಂಡು […]

ಪಡುಬಿದ್ರೆ: ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ವಿನಯ್ ಕುಮಾರ್ ಸೊರಕೆ

ಪಡುಬಿದ್ರೆ: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪಡುಬಿದ್ರಿ ಬೀಚ್‌ ನ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಪಟ್ಟ ಇಲಾಖೆ ಅಭಿಯಂತರರನ್ನು ಕರೆಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕಾಪು: ಕಡಲ್ಕೊರೆತ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ತಾಲೂಕಿನ‌ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಸಹಾಯಕ ಅಭಿಯಂತರ ಜಯರಾಜ್, […]

ಮಲ್ಪೆ: ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಯಶ್ ಪಾಲ್ ಸುವರ್ಣ

ಮಲ್ಪೆ: ಇಲ್ಲಿನ ಶಾಸಕಯಶ್ ಪಾಲ್ ಸುವರ್ಣ ಅವರು ಗುರುವಾರದಂದು ಕಡೆಕಾರ್ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಭಾಗಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಭಾವ್ಯ ಕಡಲ್ಕೊರೆತ ಪ್ರದೇಶಗಳನ್ನು ಗುರುತಿಸಿ ಕಡಲ್ಕೊರೆತ ತಡೆಗೆ ಪೂರಕ ಕಾಮಗಾರಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುತ್ಪಾಡಿ ಪಡುಕರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕೊಠಡಿಗೆ ಅಂಗನವಾಡಿಯನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಮಲ್ಪೆ ಪಡುಕರೆಯ ನದಿದಂಡೆ ಸಂರಕ್ಷಣೆ ಕಾಮಗಾರಿಯ ಪರಿಶೀಲನೆ […]

ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ ನಡೆಸಿದ ಸಚಿವೆ ಶೋಭಾ ಕರಂದ್ಲಾಜೆ: ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಉಡುಪಿ: ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದಾಗಿ ಬಿತ್ತನೆ ಮಾಡಿದ ಭತ್ತದ ಬೆಳೆಯು ಹಾನಿಯಾಗಿದ್ದು, ರೈತರಿಗೆ ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಒದಗಿಸಬೇಕು. ರೈತರು ಮತ್ತೊಮ್ಮೆ ಕೃಷಿ ಮಾಡಲು ಅಗತ್ಯವಿರುವ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ […]