ಮೇ 2ನೇ ವಾರದಿಂದ ದ್ವಿತೀಯ ಪಿಯುಸಿ, ಜೂನ್ ಮೊದಲ ವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಸುರೇಶ್ ಕುಮಾರ್
ಬೆಂಗಳೂರು : ಪ್ರಸ್ತಕ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಮೇ ತಿಂಗಳ ಎರಡನೇ ವಾರದಿಂದ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ ಮೊದಲ ವಾರದಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ ಎಂದು ಹೇಳಿದ್ದಾರೆ. 1ರಿಂದ 9ನೇ ತರಗತಿಯವರೆಗಿನ ಪಠ್ಯ ಕಡಿತವಿಲ್ಲ: ಒಂದರಿಂದ ಒಂಭತನೇ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯಕಡಿತ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನವನ್ನ […]