ಆಗಸ್ಟ್ 12- 25: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ
ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಆಗಸ್ಟ್ 12 ರಿಂದ 25 ರ ವರೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಎಂ.ಜಿ.ಎಂ ಪದವಿ ಪೂರ್ವ ಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರದ ಭಂಡಾರಕರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು […]